ಬೆಂಗಳೂರು: ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಕಾನೂನು ಇಲಾಖೆಯ ಗಮನಕ್ಕೆ ಮಧ್ಯಸ್ಥಿಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕಲಂ ಕೈ ಬಿಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ ಮಧ್ಯಸ್ಥಿಕೆ ಕಲಂ ಕಡ್ಡಾಯವಾಗಿತ್ತು. ಅದನ್ನು ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಕಲಂ ರದ್ದು ಮಾಡಿರುವುದರಿಂದ ಗುತ್ತಿಗೆದಾರರು ಮತ್ತು ಟೆಂಡರ್ ದಾರರು ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅನೇಕ ಪ್ರಕರಣಗಳಲ್ಲಿ ಈ ಕಲಂ ಬಳಸಿಕೊಂಡು ಕೋರ್ಟ್ ಮೆಟ್ಟಿಲು ಏರಿದ್ದ ಕಾರಣ ಸರ್ಕಾರ ಆರ್ಥಿಕವಾಗಿ ನಷ್ಟ ಅನುಭವಿಸಿತ್ತು ಎಂದು ಹೇಳಿದ್ದಾರೆ.