alex Certify BREAKING : ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ಚುನಾವಣೆ ನಡೆಸಿ : ಕೇಂದ್ರ ಚು.ಆಯೋಗಕ್ಕೆ ಸುಪ್ರಿಂ ಕೋರ್ಟ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ಚುನಾವಣೆ ನಡೆಸಿ : ಕೇಂದ್ರ ಚು.ಆಯೋಗಕ್ಕೆ ಸುಪ್ರಿಂ ಕೋರ್ಟ್ ಸೂಚನೆ

ನವದೆಹಲಿ: ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ನೀಡಿದ ಬಳಿಕ ಪಂಚಪೀಠ ಈ ಆದೇಶವನ್ನು ನೀಡಿದೆ. ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರೊಳಗೊಂಡ ಸಂವಿಧಾನ ಪೀಠ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 5 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತು. ಇಂದಿಗೆ ಕಾಯ್ದಿರಿಸಿದ್ದಂತ ತೀರ್ಪನ್ನು ಇದೀಗ ಪ್ರಕಟಿಸಿದೆ.ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

“370 (1) (ಡಿ) ವಿಧಿಯನ್ನು ಬಳಸಿಕೊಂಡು ಭಾರತದ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಒಂದೇ ಬಾರಿಗೆ ಅನ್ವಯಿಸಬಹುದು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. CO 273 ಅನ್ನು ಹೊರಡಿಸಲು ರಾಷ್ಟ್ರಪತಿ ಗಳು ಅಧಿಕಾರವನ್ನು ಬಳಸುವುದು ದುರುದ್ದೇಶಪೂರಿತವೆಂದು ನಾವು ಭಾವಿಸುವುದಿಲ್ಲ. ಹೀಗಾಗಿ ನಾವು ರಾಷ್ಟ್ರಪತಿಗಳು ಅಧಿಕಾರದ ಪ್ರಯೋಗವನ್ನು ಮಾನ್ಯವೆಂದು ಪರಿಗಣಿಸುತ್ತೇವೆ” ಎಂದು ಸಿಜೆಐ ಹೇಳಿದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...