alex Certify BREAKING : ಹೊಳೆಹೊನ್ನೂರು ‘ಗಾಂಧಿ ಪ್ರತಿಮೆ’ ಧ್ವಂಸ ಪ್ರಕರಣ : ಇಬ್ಬರು ಅರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೊಳೆಹೊನ್ನೂರು ‘ಗಾಂಧಿ ಪ್ರತಿಮೆ’ ಧ್ವಂಸ ಪ್ರಕರಣ : ಇಬ್ಬರು ಅರೋಪಿಗಳು ಅರೆಸ್ಟ್

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ ಮಾಡಿದ್ದರು. ಘಟನೆಗೆ ವ್ಯಾಪ ಆಕ್ರೋಶ ವ್ಯಕ್ತವಾಗಿತ್ತು. ನಂತರ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಚಿತ್ರದುರ್ಗದ ಮೂಲದವರಾಗಿದ್ದು, ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಈ ಆರೋಪಿಗಳು ಈ ಕೃತ್ಯ ಎಸಗಿದ್ದರು. ಸದ್ಯ, ಆರೋಪಿಗಳನ್ನು ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...