alex Certify ಧಾರಾಕಾರ ಮಳೆ : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರಾಕಾರ ಮಳೆ : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ( heavy Rain ) ಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಜುಲೈ 7 ರಂದು ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ.  ಜುಲೈ 8 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC) ತಿಳಿಸಿದೆ.

ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...