alex Certify ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ.

ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

2021 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಆದೇಶ ಅನ್ವಯವಾಗಲಿದೆ. ಈ ಅವಧಿಯಲ್ಲಿ ನಿವೃತ್ತರಾಗುವ ನೌಕರರು, ಅಧಿಕಾರಿಗಳಿಗೆ ರಜೆ ನಗದೀಕರಣ ಸೌಲಭ್ಯ ಇರುತ್ತದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ಸರ್ಕಾರದ ನೆರವು ಪಡೆಯುವ, ಪಡೆಯದ ಎಲ್ಲಾ ಸರ್ಕಾರಿ ಉದ್ದಿಮೆಗಳ ನೌಕರರಿಗೆ ಸೌಲಭ್ಯ ಇರುವುದಿಲ್ಲ ಎಂದು ಹಣಕಾಸು ಇಲಾಖೆ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...