ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದಾಗಿ ಮನೆಗಳು, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದು, ಸರ್ಕಾರದಿಂದ ಹೆಚ್ಚುವರಿ ಪರಿಹಾರ ಘೋಷಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿ ಅನ್ವಯ ಪರಿಹಾರ ಘೋಷಣೆ ಮಾಡಿದ್ದು, ವಿಪತ್ತು ನಿರ್ವಹಣೆ ಪರಿಹಾರದೊಂದಿಗೆ ರಾಜ್ಯ ಸರ್ಕಾರ ಕೂಡ ಹೆಚ್ಚುವರಿ ಪರಿಹಾರ ಘೋಷಿಸಿದೆ.
ಪರಿಹಾರಕ್ಕಾಗಿ ಆರ್ಥಿಕ ಸಂಪನ್ಮೂಲದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ 650 ಕೋಟಿ ರೂಪಾಯಿಗೂ ಹೆಚ್ಚು ಹಣ ಇದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಹಣ ಬಿಡುಗಡೆ ಮಾಡಿದೆ. ಅಕಾಲಿಕ ಮಳೆಯಿಂದಾಗಿ ಹಾನಿಗೀಡಾದ ಗೃಹೋಪಯೋಗಿ ವಸ್ತುಗಳು ಮತ್ತು ಮನೆಗಳಿಗೆ ವಿಪತ್ತು ನಿರ್ವಹಣೆ ಮಾರ್ಗಸೂಚಿ ಪರಿಹಾರದೊಂದಿಗೆ ರಾಜ್ಯ ಸರ್ಕಾರ ಕೂಡ ಹೆಚ್ಚುವರಿ ಪರಿಹಾರ ನೀಡಲಿದೆ ಎಂದು ಹೇಳಲಾಗಿದೆ.