ಚಿಕ್ಕಮಗಳೂರು: ಹೋಂ ಐಸೋಲೇಷನ್ ನಲ್ಲಿದ್ದ ಸೋಂಕಿತರಿಬ್ಬರು ಹೊರಗೆ ಬಂದು ಸುತ್ತಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿದ ವೇಳೆ ಇದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ಸೋಂಕಿತರು ಮನೆಬಿಟ್ಟು ಹೋಗಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಕ್ ಆಗಿದೆ. ಮನೆ ಬಳಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿದ ಸೋಂಕಿತರಿಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದೆ.