
ಬೆಂಗಳೂರು: ಸಂಚಾರ ದಟ್ಟಣೆ ಹೆಚ್ಚಾಗಿರುವ ಕೆಲವು ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದಿಂದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಬುಧವಾರ ನಡೆದ ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ ಕುರಿತು ಪೊಲೀಸರು, ಸಂಪಾದಕರ ನಡುವೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೆಹಲಿ ಬಳಿಕ ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಸಂಚಾರ ಸಮಸ್ಯೆ ಸುಧಾರಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಬಳಕೆ, ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ ಸೇರಿ ಅನೇಕ ಕ್ರಮ ಕೈಗೊಳ್ಳಲಾಗಿದೆ. ಸಂಚಾರದಟ್ಟಣೆ ಹೆಚ್ಚಾಗಿರುವ ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.