ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿದ್ದಾರೆ ಆದ್ದರಿಂದ ಅವರ ವಿರುದ್ಧ ಕ್ರಮ ಆಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ತಪ್ಪು ಮಾಡಿರುವುದು ನಿಜ, ಹೀಗಾಗಿ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ಸಿಎಂ ಹೆಸರು ತರುವುದು ಬೇಡ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು. ವಾರದ ಹಿಂದೆಯೇ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್ನಲ್ಲಿ ವಿಶೇಷ ಗಮನ ಕೊಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.