
ಪುಣೆ: ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯದಲ್ಲಿ ನಿರಾಶ್ರಿತ ವ್ಯಕ್ತಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.
ಪುಣೆ ರೈಲ್ವೇ ನಿಲ್ದಾಣ ಮತ್ತು ಮಲ್ಧಕ್ಕಾ ಚೌಕ್ ನಡುವಿನ ಸಾರ್ವಜನಿಕ ಶೌಚಾಲಯದಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆ ಮೇಲೆ ಮೃಗೀಯ ವರ್ತನೆ ತೋರಿದ್ದು, ಸಾರ್ವಜನಿಕ ಶೌಚಾಲಯದಿಂದ ಆರೋಪಿ ಹೋಗಿದ್ದನ್ನು ಬಾಲಕಿಯ ಚಿಕ್ಕಪ್ಪ ನೋಡಿ ವಿಷಯ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿಯ ಚಿಕ್ಕಪ್ಪ ಎಚ್ಚರಿಕೆ ನೀಡಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕುಟುಂಬವು ಪೊಲೀಸರನ್ನು ಸಂಪರ್ಕಿಸಿದೆ. IPC ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಮಧ್ಯವಯಸ್ಸಿನ ನಿರಾಶ್ರಿತ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.