ಬೆಂಗಳೂರು : ಬೆಂಗಳೂರಿನ ಹಲವಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಮಾಜಿ ಸಿಎಂ ಕುಮಾರಸ್ವಾಮಿ ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಲಾಗಿದ್ದು, ಕರೆಂಟ್ ಕಳ್ಳ ಖ್ಯಾತಿಯ ಹೆಚ್ಡಿಕೆ ನಿರ್ಮಾಣದ ಚಿತ್ರ ಪೆನ್ ಡ್ರೈವ್ ಬ್ರದರ್ ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ, ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68,000 ಎಂದು ಪೋಸ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.