alex Certify ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಕೊಂಗನಹಳ್ಳಿ ಗ್ರಾಮದ ಮೂಡಲಬೀದಿಯ ಮಹಿಳೆಯೊಬ್ಬರು ಮೃತಪಟ್ಟಿದ್ದು, ಭಾನುವಾರ ಮಧ್ಯಾಹ್ನ ಕುಟುಂಬದವರು, ಸಂಬಂಧಿಕರು, ಗ್ರಾಮಸ್ಥರು ಅಂತ್ಯಸಂಸ್ಕಾರಕ್ಕೆ ತೆರಳಿದ್ದಾರೆ.

ಮೃತದೇಹಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನು 15 ಜನರ ಮೇಲೆ ದಾಳಿ ಮಾಡಿವೆ. ಹೆಜ್ಜೆನು ದಾಳಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಚೆನ್ನಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 14 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...