
ಚಾಮರಾಜನಗರ: ಹೆಚ್ಚು ದಾಳಿ ನಡೆಸಿದ ಪರಿಣಾಮ ಪತಿ ಮೃತಪಟ್ಟಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬೆಳತ್ತೂರು ಗ್ರಾಮದಲ್ಲಿ ನಡೆದಿದೆ.
ಪತಿ ತುಳಸಿದಾಸ್ (45) ಹೆಜ್ಜೇನು ದಾಳಿಗೆ ಬಲಿಯಾಗಿದ್ದು, ಪತ್ನಿ ಆಶಾಗೆ ಗಂಭೀರ ಗಾಯಗಳಾಗಿವೆ. ಮಹಿಳೆಯನ್ನು ಹನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಳೆಬೆಳೆಗೆ ಕೀಟನಾಶಕ ಸಿಂಪಡಿಸುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, ಈ ದುರಂತ ಸಂಭವಿಸಿದೆ.