
ಮಂಗಳೂರು: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಪ್ರಾರ್ಥನೆ ಮುಗಿಸಿ ಶಾಲೆಯ ಒಳಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಶಾಲೆಗೆ ರಜೆ ಘೋಷಿಸಲಾಗಿದೆ.