
ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ರಾಮೇಗೌಡ(85) ಮೃತಪಟ್ಟ ರೈತರು. ಪ್ರಗತಿಪರ ರೈತ ರಾಮೇಗೌಡ ಅವರು ಜಾನುವಾರುಗಳೊಂದಿಗೆ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ತೆಂಗಿನ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಜೇನು ಹುಳುಗಳು ಏಕಾಏಕಿ ದಾಳಿ ಮಾಡಿವೆ.
ಗಂಭೀರವಾಗಿ ಗಾಯಗೊಂಡು ಅಸ್ವಸ್ಥರಾಗಿದ್ದ ಅವರನ್ನು ಕೆಆರ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.