alex Certify ಬಸ್ ನಲ್ಲಿ ಪರಿಚಿತವಾದ ಮಹಿಳೆಯಿಂದ ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್: ರೆಕಾರ್ಡ್ ಮಾಡಿ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ಪರಿಚಿತವಾದ ಮಹಿಳೆಯಿಂದ ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್: ರೆಕಾರ್ಡ್ ಮಾಡಿ ಬೆದರಿಕೆ

ಶಿವಮೊಗ್ಗ: ಹನಿಟ್ರ್ಯಾಪ್ ನಡೆಸುತ್ತಿದ್ದ ಮೈಸೂರು ಮೂಲದ ಐವರನ್ನು ಭದ್ರಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶರತ್ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೈಸೂರಿನ ವಿನಾಯಕ, ಮಹೇಶ, ಅರುಣ್ ಕುಮಾರ್, ಹೇಮಂತ್ ಹಾಗೂ ಮಹಿಳೆಯನ್ನು ಬಂಧಿಸಿದ್ದು, ಬಂಧಿತರಿಂದ ಒಂದು ಕಾರ್, 7 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಭದ್ರಾವತಿಯ ಪೆಟ್ರೋಲ್ ಬಂಕ್ ನಲ್ಲಿ ಶರತ್ ಕೆಲಸ ಮಾಡುತ್ತಿದ್ದು, ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬಳು ಪರಿಚಿತಳಾಗಿದ್ದಳು. ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡಿದ್ದಾಳೆ. ಇದನ್ನು ರೆಕಾರ್ಡ್ ಮಾಡಿಕೊಂಡು ಬೆದರಿಕೆ ಹಾಕಲಾಗಿದೆ.

ತಂಡದ ಸದಸ್ಯರು ವಿಡಿಯೋ ಬಹಿರಂಗಪಡಿಸುವುದಾಗಿ ಹೇಳಿ ಒಂದು ಲಕ್ಷ ರೂ. ಕಸಿದುಕೊಂಡಿದ್ದಾರೆ. 20 ಲಕ್ಷ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ 25 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿರುವುದಾಗಿ ಬರೆಸಿಕೊಂಡಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಶರತ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...