ಶಿವಮೊಗ್ಗ: ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, 7 ಜನರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆಯಲ್ಲಿ ನಡೆದಿದೆ.
ಚಿಕ್ಕಪೇಟೆಯ ಭಾಷಾ ಎಂಬುವವರ ಮನೆಯ ಬಳಿ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, ಭಾಷಾ, ಪತ್ನಿ ಅಸ್ಮಾ, ಮಕ್ಕಳಾದ ಆರೀಫ್, ಅನೀಫ್, ಭಾಷಾ ಪಕ್ಕದ ಮನೆಯ ನಿವಾಸಿ ಯಾಸೀನ್ ಹಾಗೂ ಹಾಸಿಗೆ ರಿಪೇರಿಗೆ ತೆರಳಿದ್ದ ಬಾಬಾ ಸಾಬ್, ಹುಸೇನ್ ಸಾಬ್ ಎಂಬುವವರು ಗಾಯಗೊಂಡಿದ್ದಾರೆ. 68 ವರ್ಷದ ಹುಸೇನ್ ಸಾಬ್ ಸ್ಥಿತಿ ಗಂಭೀರವಾಗಿದೆ.
ಹೊಸ ನಗರದ ಸರ್ಕಾರಿ ಆಸ್ಪತ್ರೆಯ ತೀವ್ರನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ದಿನ ಎರಡು ಬಾಳಿ ಹೆಜ್ಜೇನು ದಾಳಿ ನಡೆಸಿದ್ದು, ಭಾಷಾ ಪುತ್ರ ಆರೀಫ್ ಎರಡನೇ ಬಾರಿ ಹೆಜೇನು ದಾಳಿಯಿಂದ ಗಾಯಗೊಂಡಿದ್ದಾರೆ.