
ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ನಿಲುವಾಗಿಲು ಬಳಿ ನಡೆದಿದೆ.
48 ವರ್ಷದ ಸುಂದರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ರೈಸ್ ಮಿಲ್ ಒಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೋಮವಾರ ಬೆಳಿಗ್ಗೆ ಎಂದಿನಂತೆ ಇವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ನಿಲುವಾಗಿಲು ಬಿಕ್ಕಳಿ ರಸ್ತೆಯ ಬಳಿ ಹೆಜ್ಜೇನುಗಳು ದಾಳಿ ನಡೆಸಿವೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ವಿಧಿವಶರಾಗಿದ್ದಾರೆ.