ಬೆಂಗಳೂರು : ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ ಮೇಲೆಯೂ ವಿಪಕ್ಷಗಳ ಶಾಸಕರು ಸದನದಲ್ಲಿ ಪುನ: ಅದನ್ನೇ ಪ್ರಸ್ತಾಪಿಸುವುದು ತರವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂತಹ ಪ್ರಕರಣದಲ್ಲಿ ಯಾರೇ ತೊಂದರೆಗೆ ಒಳಗಾಗಿದ್ದರೂ ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದಸ್ಯರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ನೋವಿನ ವಿಚಾರ. ರಾಜ್ಯದ ಕೋಟ್ಯಂತರ ಜನರ ಆಶೋತ್ತರಗಳನ್ನು, ದುಃಖ ದುಮ್ಮಾನಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿರುವುದು ನಮ್ಮ ಕರ್ತವ್ಯ. ಇದಕ್ಕೆ ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ನಮ್ಮ ಜೊತೆ ಸಹಕರಿಸಬೇಕು ಎಂದರು.
ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ ಮೇಲೆಯೂ ವಿಪಕ್ಷಗಳ ಶಾಸಕರು ಸದನದಲ್ಲಿ ಪುನ:…
— Siddaramaiah (@siddaramaiah) March 21, 2025