
ದಾವಣಗೆರೆ: ಹೊನ್ನಾಳಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಟಿಬಿ ಸರ್ಕಲ್ ಬಳಿ ಘಟನೆ ನಡೆದಿದೆ.
ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನಾ ಸಮಿತಿ ವತಿಯಿಂದ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿದ್ದು, ಅದನ್ನು ಹರಿದು ಹಾಕಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿಯ ಸದಸ್ಯರು ಒತ್ತಾಯಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.