ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್(24) ಮೃತ ದೇಹ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರೇಣುಕಾಚಾರ್ಯ ಅವರೊಂದಿಗೆ ಮಾತನಾಡುತ್ತೇನೆ. ನಂತರ ಚಂದ್ರಶೇಖರ್ ಅವರ ತಂದೆ ಜೊತೆಗೂ ಮಾತನಾಡುತ್ತೇವೆ. ಬಳಿಕ ಕುಟುಂಬಸ್ಥರು ನೀಡಿದ ದೂರಿನಂತೆ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ರೇಣುಕಾಚಾರ್ಯ ಮತ್ತು ಚಂದ್ರಶೇಖರ್ ತಂದೆಯವರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.