ಬೆಂಗಳೂರು: ಸರ್ಕಾರದಿಂದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಗೌರವದನ 51.71 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
2022 -23 ನೇ ಸಾಲಿನ ವಿವಿಧ ವಿಷಯಗಳಿಗೆ ಸರ್ಕಾರದ ಆದೇಶ, ಸುತ್ತೋಲೆಗಳ ಅನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಯಾಗಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನವನ್ನು ಅವರು ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಬಿಡುಗಡೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.