ಬೆಂಗಳೂರು: ಸಿಮೆಂಟ್ ಸಾಕ್ಸ್ ಸಾಗಿಸುತ್ತಿದ್ದ ಟ್ರಕ್ , ಪಿಕ್ ಅಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಮಿಡ್ನಾಪುರದ ಖರಗ್ಪುರದ ಬೂರಮಾಲಾ ಪ್ರದೇಶದಲ್ಲಿ ನಡೆದಿದೆ.
ಮೂವರು ಹೂವು ಬೆಳೆಗಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೂ ಮೂವರು ಆಸ್ಪತ್ರೆಯಲ್ಲಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಹಲವಾರು ವ್ಯಕ್ತಿಗಳು ಗಾಯಗೊಂಡಿದ್ದು, ಅವರಲ್ಲಿ ಕೆಲವರನ್ನು ಖರಗ್ಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರರನ್ನು ಮೇದಿನಿಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 20-22 ಹೂವು ಬೆಳೆಗಾರರಿದ್ದು, ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು. ಸದ್ಯ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.