alex Certify BIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೇರಿಯಾಗಿದೆ.

ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮಧುಸೂಧನ್ ಎಂಬುವವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭೀಮಾಶಂಕರ್ ಕುಟುಂಬದ ಜೊತೆ ಟ್ರಿಪ್ ಬಂದಿದ್ದ ಮಧುಸೂಧನ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೇರಿಯಾಗಿದೆ. ಮಧುಸೂಧನ್ ಪಿಎಸ್ ಆಗಬೇಕೆಂಬ ಕನಸು ಹೊತ್ತುಕೊಂಡು ಪರೀಕ್ಷಾ ತಯಾರಿಯಲ್ಲಿದ್ದರು. ಆದರೆ ಟ್ರಿಪ್ ಗೆ ಬಂದ ಮಧುಸೂಧನ್ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.

ಏಳು ಜನರು ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...