alex Certify ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರತ್ಯೇಕ ಭೀಕರ ಅಪಘಾತ ಸಂಭವಿಸಿದ್ದು, ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ.

ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.ಚಿಕ್ಕಬೊಮ್ಮಸಂದ್ರ ನಿವಾಸಿ ಸಂದರಾಜು (21) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ. ಯಾದಗಿರಿ ಮೂಲದ ದೇವರಾಜು ನಗರದಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದನು. ಅಟ್ಟೂರು ಲೇಔಟ್ ಬಸ್ ನಿಲ್ದಾಣದ ಬಳಿ ಎಂ.ಎಸ್ ಪಾಳ್ಯದ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅದೇ ರೀತಿ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಕೆಜಿ ಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಮಹೇಂದ್ರ ಕುಮಾರ್ (50) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಕುಮಾರ್ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...