ಚಾಮರಾಜಗರ : ಹಬ್ಬದ ದಿನವೇ ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಚಾಮರಾಜನಗರದ ಕೊಳ್ಳೇಗಾಲದ ಜಿನಕನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಭತ್ತದ ಕಟಾವು ಯಂತ್ರದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಮೃತರನ್ನು ಸಂತೋಷ್, ಸೌಮ್ಯ, ಲಾವಣ್ಯ ಎಂದು ಗುರುತಿಸಲಾಗಿದೆ. ಮೃತರು ಪಾಳ್ಯ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.ಸಂಕ್ರಾಂತಿ ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.