ರಾಮನಗರ : ಬೈಕ್ ಗೆ ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಬೈಕ್ ನಲ್ಲಿದ್ದ ಸಿದ್ದಪ್ಪ(65), ಅರುಣ(23) ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.