alex Certify ಕೋಲಾರದಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಕೋಲಾರ :  ಭೀಕರ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಕೋಲಾದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಬೆಂಗಳೂರಿಗೆ ಹೋಗಿ ವಾಪಸ್ ಆಗುವ ವೇಳೆ ಈ ದುರ್ಘಟನೆ ಸಂಭವಿಸಿದೆ, ಮೃತರನ್ನು ವೇಮಗಲ್ ಮೂಲದ ಪುನೀತ್ (23) ಕೋಲಾರದ ಜಗನ್ (22) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ವೇಮಗಲ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಯಾವ ವಾಹನ ಡಿಕ್ಕಿ ಹೊಡೆಯಿತು, ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...