ಈಶಾನ್ಯ ಈಜಿಪ್ಟ್ನ ಹೆದ್ದಾರಿಯಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಪಲ್ಟಿಯಾದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ.
ಸೂಯೆಜ್ ಮೂಲದ ಗಲಾಲಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಐನ್ ಸೊಖ್ನಾ ಹೆದ್ದಾರಿಯನ್ನು ಬಳಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಈಜಿಪ್ಟ್ನ ಆರೋಗ್ಯ ಸಚಿವಾಲಯ ಸೋಮವಾರ ರಾತ್ರಿ ತಿಳಿಸಿದೆ. ಅಪಘಾತಕ್ಕೆ ಕಾರಣವೇನೆಂದು ಸಚಿವಾಲಯ ಬಹಿರಂಗಪಡಿಸಿಲ್ಲ.
28 ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸೂಯೆಜ್ ವೈದ್ಯಕೀಯ ಸಂಕೀರ್ಣಕ್ಕೆ ಸಾಗಿಸಿದವು, ಆದರೆ ಅವರ ಸ್ಥಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಹೇಳಿಕೆ ತಿಳಿಸಿದೆ. ಕಳಪೆ ಸಾರಿಗೆ ಸುರಕ್ಷತಾ ದಾಖಲೆಯನ್ನು ಹೊಂದಿರುವ ಈಜಿಪ್ಟ್ನಲ್ಲಿ ಮಾರಣಾಂತಿಕ ಸಂಚಾರ ಅಪಘಾತಗಳು ಪ್ರತಿವರ್ಷ ಸಾವಿರಾರು ಜೀವಗಳನ್ನು ಬಲಿತೆಗೆದುಕೊಳ್ಳುತ್ತವೆ.