ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರು ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸಂಗನಬಸಪ್ಪ(36) ಪತ್ನಿ ರೇಖಾ, ಪುತ್ರ ಅಗಸ್ತ್ಯ (7) ಸಂಬಂಧಿ ಭೀಮಾಶಂಕರ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.