ಬೀದರ್ : ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿ ನಡೆದಿದೆ.
ಮೃತ ಬಾಲಕರನ್ನು ಗಣೇಶ್ (15) ಸಾಯಿನಾಥ್ (15) ಎಂದು ಗುರುತಿಸಲಾಗಿದೆ. ಹೊಂಡದಿಂದ ನೀರು ತರಲು ಹೋದಾಗ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಬಾಲಕರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಈ ಸಂಬಂಧ ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.