ಮಂಡ್ಯ : ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನಾ (19) ಎಂದು ಗುರುತಿಸಲಾಗಿದೆ.
ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ.
ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದ ಸುಹಾನ ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.