alex Certify ಕೆಲಸಕ್ಕೆ ಹೊರಟಾಗಲೇ ದುರಂತ: ಭೀಕರ ಅಪಘಾತದಲ್ಲಿ 6 ಕಾರ್ಮಿಕರು ಸಾವು – 16 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆ ಹೊರಟಾಗಲೇ ದುರಂತ: ಭೀಕರ ಅಪಘಾತದಲ್ಲಿ 6 ಕಾರ್ಮಿಕರು ಸಾವು – 16 ಮಂದಿ ಗಂಭೀರ

ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ  ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 16 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾನ್ಪುರ್ ಗ್ರಾಮಾಂತರ ಪ್ರದೇಶದ ಭೋಗ್ನಿಪೂರ್ ಕೊಟ್ವಾಲಿ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಲಾರಿ ಅಡಿಯಲ್ಲಿ ಸಿಲುಕಿದ್ದ ಅನೇಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 8 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ –ಪರೋಕ್ಷ ಸುಲಿಗೆ ಎಂದು ಆಕ್ರೋಶ

ಆರು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳಾ ಕಾರ್ಮಿಕರಾದ ಶಾಮಾ ದೇವಿ ಈ ಬಗ್ಗೆ ಮಾತನಾಡಿ, ಹತೀರ್ ಪುರ ಜಿಲ್ಲೆಯ ನಿವಾಸಿಗಳಾಗಿದ್ದು ಎಲ್ಲರೂ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇವರುಗಳಿಗೆ ಇಟವಾದಲ್ಲಿ ಕಲ್ಲಿದ್ದಲು ಜರಡಿ ಮಾಡುವ ಕೆಲಸ ಸಿಕ್ಕಿದ್ದರಿಂದ ಅಲ್ಲಿಗೆ ಪ್ರಯಾಣ ಬೆಳೆಸುತ್ತಿದ್ದರು. ಅಪಘಾತದಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭೋಗ್ನಿಪುರ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...