alex Certify BREAKING: ಮರಕ್ಕೆ ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮರಕ್ಕೆ ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರು ಗಂಭೀರ

ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಕುಂದಾಪುರದ ಗೀತಾ ಮತ್ತು ಶಾರದಾ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೇಗವಾಗಿದ್ದ ಕಾರ್ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್  ನ ಅರ್ಧ ಭಾಗದವರೆಗೂ ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...