
ಚಿತ್ರದುರ್ಗ: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೈನಡು ಗ್ರಾಮದ ಬಳಿ ಅಪಘಾತ ನಡೆದಿದೆ.
ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ(29), ಗಿರೀಶ(23) ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ನಲ್ಲಿ ತೆರಳುವಾಗ ಟ್ಯಾಂಕರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.