
ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಗಣಕನಹಳ್ಳಿ ನಿವಾಸಿಗಳಾದ ಮನೋಹರ(19), ಶ್ವೇತಾ(38), ಸುಕೃತಾ(4) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಕೋಟೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.