alex Certify ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. 30 ವರ್ಷದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ನಂತರ ಒಂದಷ್ಟು ದೂರ ಕಾರ್ ಅನ್ನು ಲಾರಿ ಎಳೆದುಕೊಂಡು ಹೋಗಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತಷ್ಟು ದುರಂತ ತಪ್ಪಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...