alex Certify ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ ಬಳಿಯ ಹಲವು ಬಿರಿಯಾನಿ ಹೋಟೆಲ್ ಗಳ ಮೇಲೆ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಹೋಟೆಲ್ ಮಾಲಿಕರ ವಿರುದ್ಧ ಜಿಎಸ್ ಟಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಹೋಟೆಲ್ ಗಳಲ್ಲಿ ಯುಪಿಐ ಪಾವತಿ ಖಾತೆಗಳನ್ನು ಬದಲಾಯಿಸಿ ವಹಿವಾಟು ನಡೆದಿರುವ ಆರೋಪ ಕೇಳಿಬಂದಿದೆ. ಅಲ್ಲದೇ ವಹಿವಾಟಿನ ಲೆಕ್ಕಪತ್ರ ಅಸಮರ್ಪಕ ನಿರ್ವಹಣೆ ಬಗ್ಗೆಯೂ ಕೇಳಿಬಂದಿದೆ. ವಿವಿಧ ಹೋಟೆಲ್ ಗಳು, ಹೋಟೆಲ್ ಮಾಲಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. ದಾಳಿ ವೇಳೆ 1.47 ಕೋಟಿ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...