
ಹೊಸಪೇಟೆ: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂವರು ಪುರುಷರು, ಮೂವರು ಮಹಿಳೆಯರು, ಮೂವರು ಮಕ್ಕಳಿರುವ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹೊಸಪೇಟೆಯ ನಿವಾಸಿಗಳಾಗಿರುವ ಒಂದೇ ಕುಟುಂಬದವರು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪ್ರಯತ್ನವನ್ನು ತಡೆದಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.