alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.3 ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 15 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿಗಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯಿಸಿ, ಐಟಿಐ, ಡಿಪ್ಲೋಮ, ಬಿ.ಇ, ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೋವಿಡ್ 19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಎಲ್ಲರು ತಪ್ಪದೆ ಮಾಸ್ಕ್ ಮತ್ತು ಸ್ಯಾನಿಟೇಸರ್ ಬಳಸುವ ಮೂಲಕ ಸಾಮಾಜಿಕ ಅಂತರವನ್ನು ಪಾಲಿಸಿ ಮೇಳದಲ್ಲಿ ಭಾಗವಹಿಸಿ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ: ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ದೂ.ಸಂ.;08392-273988,9844444958 ಗೆ ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...