alex Certify ನಾಳೆ ಕೊಪ್ಪಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ: 100 ಹಾಸಿಗೆಗಳ ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಕೊಪ್ಪಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ: 100 ಹಾಸಿಗೆಗಳ ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆ

ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೊಪ್ಪಳದ ತಾಯಿ ಮತ್ತು ಮಕ್ಕಳ 100 ಹಾಸಿಗೆಗಳ ಆಸ್ಪತ್ರೆ, ಗಂಗಾವತಿ ಮತ್ತು ಕುಷ್ಟಗಿ ತಾಲೂಕಾ ಆಸ್ಪತ್ರೆಗಳ ಐ.ಸಿ.ಯು. ಘಟಕಗಳು ಹಾಗೂ ಕುಷ್ಟಗಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ಹನುಮಸಾಗರದ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ಆಗಸ್ಟ್ 1 ರಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕಿಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ ಅವರು ಉಪಸ್ಥಿತರಿರುವರು.

ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ. ಚಂದ್ರಶೇಖರ್ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಹಾಂತೇಶ ಎಸ್. ಪಾಟೀಲ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ಡಿ. ರಂದೀಪ್, ನಿರ್ದೇಶಕರಾದ ಡಾ. ಎಂ.ಇಂದುಮತಿ ಅವರು ಪಾಲ್ಗೊಳ್ಳುವರು.

ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ, ಮುಖ್ಯ ಅಭಿಯಂತರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿ. ಮಂಜಪ್ಪ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ|| ವೈಜನಾಥ ಇಟಗಿ ಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...