ನವದೆಹಲಿ: ದೇಶಾದ್ಯಂತ ಮಾರ್ಚ್ 1 ರಿಂದ 3 ನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭವಾಗಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಆರೋಗ್ಯ ಸಂಬಂಧಿ ತೊಂದರೆ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ದರದಲ್ಲಿ ಲಸಿಕೆ ಅಭಿಯಾನ ಶುರುವಾಗಿದೆ. ಲಸಿಕೆ ಅಭಿಯಾನಕ್ಕೆ ಹಿರಿಯ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಲಸಿಕಾ ಅಭಿಯಾನಕ್ಕೆ ವೇಗ ನೀಡುವ ಉದ್ದೇಶದಿಂದ ದೇಶದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕಾ ಕೇಂದ್ರಗಳನ್ನು ಆರಂಭಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ಆಯ್ದ 20,000 ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ಪಡೆಯಲು ಅನುಮತಿ ನೀಡಲಾಗಿತ್ತು. ಈಗ ಎಲ್ಲ ಖಾಸಗೀ ಆಸ್ಪತ್ರೆಗಳಿಗೂ ಸೌಲಭ್ಯ ವಿಸ್ತರಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಅಭಿಯಾನ ಮುಂದುವರಿಯಲಿದೆ ಎಂದು ಹೇಳಲಾಗಿದೆ.