ನವದೆಹಲಿ: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 24 ಗಂಟೆಯೂ ಲಸಿಕೆ ನೀಡಲು ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಲಸಿಕೆ ನೀಡಬೇಕು ಎಂಬ ಕಾಲಮಿತಿಯನ್ನು ರದ್ದು ಮಾಡಲಾಗಿದ್ದು, ಸಮಯ ವಿಸ್ತರಿಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯಗಳು ಒಪ್ಪಿದರೆ ಎಲ್ಲಾ ಆಸ್ಪತ್ರೆಗಳಲ್ಲೂ ಲಸಿಕೆ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ವೇಗ ನೀಡುವ ಉದ್ದೇಶದಿಂದ ಅನುಕೂಲಕರವಾದ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಲಸಿಕೆ ನೀಡಬಹುದಾಗಿದೆ. ಜೊತೆಗೆ ಮೂಲಸೌಕರ್ಯ ಇರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಕೂಡ ಲಸಿಕೆ ನೀಡಬಹುದು ಎಂದು ಹೇಳಲಾಗಿದೆ.