alex Certify ಅಪೊಲೋ ಆಸ್ಪತ್ರೆಗೆ ದಾಖಲಾದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪೊಲೋ ಆಸ್ಪತ್ರೆಗೆ ದಾಖಲಾದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ

ಇಂದು ಬೆಳಿಗ್ಗೆ ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಂಜುನಾಥ್ ಮತ್ತು ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು. ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಬೇಕಾಗಿದ್ದರಿಂದ ಮಧ್ಯಾಹ್ನದ ನಂತರ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿ ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...