ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟಕ್ಕೂ ಜನೌಷಧ ಮಾರಾಟ ಕೇಂದ್ರಗಳನ್ನು ವಿಸ್ತರಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಆಸ್ಪತ್ರೆಗಳು ಇರುವ ಸ್ಥಳದಿಂದ ನಗರ ಪ್ರದೇಶದಲ್ಲಿ 100 ಮೀಟರ್ ಮತ್ತು ಗ್ರಾಮಾಂತರ ಪ್ರದೇಶದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ಔಷಧ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎನ್ನುವ ನಿಯಮ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ
2500 ಕ್ಕೂ ಹೆಚ್ಚು ವೈದ್ಯರ ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯಿಂದ ವೈದ್ಯರ ನೇಮಕಾತಿ ನಡೆಯಲಿದೆ. ಸ್ನಾತಕೋತ್ತರ ಪದವಿ ಪಡೆದ ಬಳಿಕ ವೈದ್ಯರು ಸರ್ಕಾರ ನಿಯೋಜಿಸಿದ ಸ್ಥಳದಲ್ಲಿ 1 ವರ್ಷ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.