alex Certify ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ.

ಕೋಲಾರ ಗಡಿ ಭಾಗದ ತಮಿಳುನಾಡಿನ ಬೇರಿಕೆ ಬಳಿ ಮಗುವಿನ ರಕ್ಷಣೆ ಮಾಡಲಾಗಿದೆ. ನಾಲ್ಕು ದಿನದ ಪುಟ್ಟ ಕಂದಮ್ಮ ತಾಯಿ ಮಡಿಲು ಸೇರಿದೆ. ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆ ಬಂಧಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮಗುವನ್ನು ರಕ್ಷಣೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ್ದಾರೆ.

ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಮೂವರು ಮಹಿಳೆಯರು ನಿನ್ನೆ ಮಗು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದರು. ಕಳ್ಳರ ಜಾಡು ಹಿಡಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಓರ್ವ ಮಹಿಳೆಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...