ಬೆಂಗಳೂರು: ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಡಿಸೆಂಬರ್ 11 ರಂದು ಖಾಸಗಿ ಆಸ್ಪತ್ರೆ ಒಪಿಡಿ ಮಾಡಲು ನಿರ್ಧರಿಸಲಾಗಿದೆ.
ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಅಲೋಪಥಿ ವೈದ್ಯರು ಡಿಸೆಂಬರ್ 11 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊರರೋಗಿ ವಿಭಾಗವನ್ನು ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಿದ್ದಾರೆ. ತುರ್ತು ಚಿಕಿತ್ಸೆ ಮತ್ತು ಕೋವಿಡ್ ಚಿಕಿತ್ಸೆ, ಸೇವೆ ಲಭ್ಯವಿರುತ್ತದೆ.
ಕೇಂದ್ರ ಸರ್ಕಾರ ಹಾನಿಕಾರಕವಲ್ಲದ ಗೆಡ್ಡೆ ತೆಗೆಯುವುದು ಸೇರಿದಂತೆ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆಯುರ್ವೇದ ವೈದ್ಯರಿಗೆ ಅನುಮತಿ ನೀಡಿದೆ. ಸ್ನಾತಕೋತ್ತರ ಪದವೀಧರ ಆಯುರ್ವೇದ ವೈದ್ಯರು ಪ್ರಾಯೋಗಿಕ ತರಬೇತಿ ಪಡೆದು ಶಸ್ತ್ರಚಿಕಿತ್ಸೆ ನಡೆಸಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಇದನ್ನು ವಿರೋಧಿಸಿ ಐಎಂಎ ನೇತೃತ್ವದಲ್ಲಿ ಡಿಸೆಂಬರ್ 8 ರಂದು ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಡಿಸೆಂಬರ್ 11 ರಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಮಾಡಲಾಗುವುದು ಎಂದು ಹೇಳಲಾಗಿದೆ.