ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೊಟ್ಟೆ, ಕಷಾಯ, ಬಾಳೆಹಣ್ಣು, ಹಾಲು ನೀಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ.
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಕಾಲೇಜುಗಳಿಗೆ ಆಕರ್ಷಿಸಲು ಮತ್ತು ಪೌಷ್ಟಿಕಾಂಶ, ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಜನೆ ರೂಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಹಾಲು, ಬಾಳೆಹಣ್ಣು, ಕಷಾಯ ನೀಡಲಾಗುವುದು.
ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕೊರೋನಾ ಕಾರಣದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ 7 ಹಾಸ್ಟೆಲ್ ಗಳಿದ್ದು 1968 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ, ಪೌಷ್ಟಿಕಂಶ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯಲು ಹಾಲು, ಮೊಟ್ಟೆ, ಕಷಾಯ ನೀಡಲಾಗುವುದು ಎನ್ನಲಾಗಿದೆ.