ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಶನಿವಾರ ಚಾಲನೆ ನೀಡಲಾಗಿದೆ.
ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ನೀಡುತ್ತಿರುವ ತಿಂಡಿ, ಊಟದ ವಿವರಗಳನ್ನು ಅಪ್ಲೋಡ್ ಮಾಡಲಾಗುವುದು. ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲಿ ನೀಡುವ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ಫೋಟೋಗಳನ್ನು https://foodswdok.in/cr ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲಿದ್ದು, ಪೋಷಕರು, ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.