ಹಾಸನ: ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿನಿಯರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರಲ್ಲಿ ವಾಂತಿ, ಭೇದಿ ಶುರುವಾಗಿದ್ದು, ತೀವ್ರ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಆಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.